Monday, 2 March 2015

ಬಾನಿಗೊಂದು ಎಲ್ಲೆ ಎಲ್ಲಿದೆ



ಹೇ..............         ಹಾ.............
ಬಾನಿಗೊಂದು ಎಲ್ಲೆ ಎಲ್ಲಿದೆ ನಿನ್ನಾಸೆಗೆಲ್ಲಿ ಕೊನೆಯಿದೆ
ಏಕೆ ಕನಸು ಕಾಣುವೆ ನಿಧಾನಿಸು ನಿಧಾನಿಸು

ಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆ
ಮರಳುಗಾಡಿನಲ್ಲಿ ಸುಮ್ಮನೇಕೆ ಅಲೆಯುವೆ
ಅವನ ನಿಯಮ ಮೀರಿ ಇಲ್ಲಿ ಏನೂ ಸಾಗದು
ನಾವು  ನೆನಸಿದಂತೆ ಬಾಳಲೇನು ನಡೆಯದು
ವಿಷಾದವಾಗಲಿ, ವಿನೋದವಾಗಲಿ
ಅದೇನೆ ಆಗಲಿ ಅವನೇ ಕಾರಣ ||ಬಾನಿಗೊಂದು||

ಹುಟ್ಟು ಸಾವು ಬಾಳಿನಲ್ಲಿ ಎರಡು ಕೊನೆಗಳು
ಬಯಸಿದಾಗ ಕಾಣದಿರುವ ಎರಡು ಮುಖಗಳು
ಹರುಷವೊಂದೇ ಯಾರಿಗುಂಟು ಹೇಳು ಜಗದಲಿ
ಹೂವು ಮುಳ್ಳು ಎರಡು ಉಂಟು ಬಾಳ ಲತೆಯಲಿ
ದುರಾಸೆಯೇತಕೆ, ನಿರಾಸೆಯೇತಕೆ
ಅದೇನೆ ಬಂದರು ಅವನ ಕಾಣಿಕೆ ||ಬಾನಿಗೊಂದು||

Sunday, 1 March 2015

ಕಾಣದ ಕಡಲಿಗೆ ಹಂಬಲಿಸಿದೆ ಮನ


ಕಾಣದ ಕಡಲಿಗೆ ಹಂಬಲಿಸಿದೆ ಮನ
ಕಾಣಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ

ಕಾಣದ ಕಡಲಿನ ಮೊರೆತದ ಜೋಗುಳ
ಒಳಗಿವಿಗಿಂದು ಕೇಳುತಿದೆ
ನನ್ನ ಕಲ್ಪನೆಯು ತನ್ನ ಕಡಲನೆ
ಚಿತ್ರಿಸಿ ಚಿಂತಿಸಿ ಸುಯ್ಯುತಿದೆ
ಎಲ್ಲಿರುವುದೋ ಅದು ಎಂತಿರುವುದೋ ಅದು
ನೋಡಬಲ್ಲೆನೆ ಒಂದು ದಿನ
ಕಡಲನು ಕೂಡಬಲ್ಲೆನೆ ಒಂದು ದಿನ

ಸಾವಿರ ಹೊಳೆಗಳು ತುಂಬಿ ಹರಿದರು
ಒಂದೆ ಸಮನಾಗಿಹುದಂತೆ
ಸುನೀಲ ವಿಸ್ತರ ತರಂಗ ಶೋಭಿತ
ಗಂಭೀರಾಂಭುದಿ ತಾನಂತೆ
ಮೂನ್ನೀರಂತೆ ಅಪಾರವಂತೆ
ಕಾಣಬಲ್ಲೆನೆ ಒಂದು ದಿನ
ಅದೊರೊಳು ಕರಗಲಾರೆನೆ ಒಂದು ದಿನ

ಜಟಿಲ ಕಾನನದ ಕುಟಿಲ ಪಥಗಳಲಿ
ಹರಿವ ತೊರೆಯು ನಾನು
ಎಂದಿಗಾದರು ಕಾಣದ ಕಡಲನು
ಸೇರಬಲ್ಲೆನೇನು
ಸೇರಬಹುದೆ ನಾನು
ಕಡಲ ನೀಲಿಯೊಳು ಕರಗಬಹುದೆ ನಾನು